ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ರದ್ದಾದ ಬೆನ್ನಲ್ಲೇ A1 ಆರೋಪಿ ಪವಿತ್ರಗೌಡಳನ್ನು ಅರೆಸ್ಟ್ ಮಾಡಿದ್ದಾರೆ, ಇದೀಗ ನಟ ದರ್ಶನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಹೊಸಕೇರೇಹಳ್ಳಿಯಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕೊಲೆ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ ಬೆಳಗ್ಗೆ ಮಹತ್ವದ ತೀರ್ಪು ನೀಡಿತ್ತು. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶದ ಬೆನ್ನಲ್ಲೇ A1 ಆರೋಪಿ ಪವಿತ್ರಗೌಡ, ಪ್ರದೋಶ್, ಲಕ್ಷ್ಮಣ ನನ್ನು ಅರೆಸ್ಟ್ ಮಾಡಿದ್ದರು.
ಇದೀಗ ನಟ ದರ್ಶನ್ ನನ್ನು ಹೊಸಕೇರೇಹಳ್ಳಿಯ ಪ್ರೆಸ್ಟೀಜ್ ಸೌತ್ ರಿಡ್ಜ್ ಅಪಾರ್ಟ್ಮೆಂಟ್ ನಲ್ಲಿರುವ 15 ನೆ ಮಹಡಿಯಲ್ಲಿರುವ ವಿಜಯಲಕ್ಷ್ಮಿ ಫ್ಲಾಟ್ ನಂ. 4154 ರಲ್ಲಿ ಬಂಧಿಸಲಾಗಿದೆ.ಕಾಮಾಕ್ಷಿಪಾಳ್ಯ ಇನ್ಸ್ಪೆಕ್ಟರ್ ಗಳಾದ ನಾಗೇಶ್, ಸುಬ್ರಮಣ್ಯ ನೇತೃತ್ವದಲ್ಲಿ ಅರೆಸ್ಟ್ ಮಾಡಲಾಗಿದೆ.
ಎಲ್ಲರೂ ಸರೆಂಡರ್ ಆಗಬೇಕು. ಆರೋಪಿ ಎಷ್ಟೇ ದೊಡ್ಡವನಾಗಿದ್ದರೂ, ಅವನು ಅಥವಾ ಅವಳು ಕಾನೂನಿಗಿಂತ ಮೇಲಲ್ಲ ಎಂಬ ಸಂದೇಶವನ್ನು ಇದು ನೀಡುತ್ತದೆ. ಯಾವುದೇ ಮಟ್ಟದಲ್ಲಿ ನ್ಯಾಯ ವಿತರಣಾ ವ್ಯವಸ್ಥೆಯು ಯಾವುದೇ ಬೆಲೆ ತೆತ್ತಾದರೂ ಕಾನೂನಿನ ನಿಯಮವನ್ನು ಕಾಪಾಡಿಕೊಳ್ಳಬೇಕು ಎಂಬ ಬಲವಾದ ಸಂದೇಶವನ್ನು ಇದು ಒಳಗೊಂಡಿದೆ. ಯಾವುದೇ ವ್ಯಕ್ತಿ ಕಾನೂನಿಗಿಂತ ಮೇಲಲ್ಲ ಅಥವಾ ಅದಕ್ಕಿಂತ ಕೆಳಗಿಲ್ಲ.
ನಾವು ಅದನ್ನು ಪಾಲಿಸುವಾಗ ಯಾರ ಅನುಮತಿಯನ್ನೂ ಕೇಳುವುದಿಲ್ಲ. ಎಲ್ಲಾ ಸಮಯದಲ್ಲೂ ಕಾನೂನಿನ ನಿಯಮವನ್ನು ಕಾಪಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಆದೇಶದಲ್ಲಿ ತಿಳಿಸಿದ್ದರು. ಈ ಆದೇಶದ ಬೆನ್ಬಲ್ಲೇ ಪವಿತ್ರಗೌಡ ಪ್ರದೋಶ್ ಲಕ್ಶ್ಮಣ ಬಳಿಕ ಇದೀಗ ನಟ ದರ್ಶನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.