ಬೆಂಗಳೂರು : ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕಳಪೆ ಆಹಾರ ವಿತರಿಸುವ ಅಂಗಡಿಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ನಿಯಮ ಪಾಲಿಸದ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ಹಲವಡೆ ಆಹಾರ ಇಲಾಖೆ ದಾಳಿ ನಡೆಸಿದ್ದು, ಹೋಳಿಗೆ ಮನೆ, ಅಮ್ಮಾಸ್ ಪೇಸ್ಟ್ರೀಸ್ ಅಂಗಡಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಕೇಕ್ ಗೆ ಕಲರ್ ಬಳಕೆ, ಆಹಾರಗಳಿಗೆ ಪ್ಲ್ಯಾಸ್ಟಿಕ್ ಬಳಕೆ ಮಾಡುತ್ತಿರುವುದು ಕಂಡು ಬಂದಿದ್ದು, ನೋಟಿಸ್ ಜಾರಿ ಮಾಡಿದ್ದಾರೆ.