ಮೈಸೂರು : ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಅರಣ್ಯ ವೀಕ್ಷಕನೊಬ್ಬ ಕ್ವಾರ್ಟರ್ಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನಲ್ಲಿ ನಡೆದಿದೆ.
ಪಿ.ಸುರೇಶ್ (34) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸುರೇಶ್ ಅರಣ್ಯ ಸಿಬ್ಬಂದಿಗೆ ನೀಡಿದ ಕ್ವಾರ್ಟರ್ಸ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೇಲಧಿಕಾರಿಗಳು ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಸುರೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.ಎಸಿಎಫ್ ಅಮೃತ ಮಾಯಪ್ಪನವರ್ ವಿರುದ್ಧ ಆರೋಪ ಕೇಳಿಬಂದಿದೆ.
ಆದರೆ ಸರಗೂರು ಪೊಲೀಸ್ ಠಾಣೆಯಲ್ಲಿ ಹೊಟ್ಟೆನೋವು ತಾಳಲಾರದೇ ಸಾವು ಎಂದು ಪ್ರಕರಣ ದಾಖಲಾಗಿದೆ. ಡೆತ್ ನೋಟ್ ಇದ್ದರೂ ಹೊಟ್ಟೆ ನೋವು ಎಂದು ಎಫ್ .ಐ. ಆರ್‌ನಲ್ಲಿ ಉಲ್ಲೇಖ ಮಾಡಿದ್ದಾರೆಂದು ಸುರೇಶ್ ಪೋಷಕರು ಆರೋಪಿಸಿದ್ದಾರೆ. ಹಿರಿಯ ಅಧಿಕಾರಿಗಳ ರಕ್ಷಣೆಗೆ ಪೊಲೀಸರು ಮುಂದಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.