ನವದೆಹಲಿ: ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಲಾಲೂ ಪ್ರಸಾದ್ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ ದಾಖಲಿಸಲಾಗಿದೆ. ಅವರು ಪ್ರಸ್ತುತ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಕುಟುಂಬ ಸದಸ್ಯರು ಆಸ್ಪತ್ರೆಯಲ್ಲಿದ್ದಾರೆ, ಅವರ ಆರೈಕೆ ಮತ್ತು ಬೆಂಬಲವನ್ನು ಖಚಿತಪಡಿಸುತ್ತಾರೆ.
ಈ ಕುರಿತು ಅವರ ಪುತ್ರ ಟ್ವೀಟ್ ಮಾಡಿದ್ದು, ರಾಷ್ಟ್ರೀಯ ಅಧ್ಯಕ್ಷ, ಗೌರವಾನ್ವಿತ ಶ್ರೀ ಲಾಲು ಪ್ರಸಾದ್ ಯಾದವ್ ಅವರನ್ನು ಅನಾರೋಗ್ಯದ ಕಾರಣ ದೆಹಲಿ ಏಮ್ಸ್ಗೆ ದಾಖಲಿಸಲಾಗಿದೆ. ಬಿಹಾರದ ಎಲ್ಲಾ ಜನರು ಲಾಲು ಜೀ ಶೀಘ್ರ ಗುಣಮುಖರಾಗಲಿ ಎಂದು ದೇವರನ್ನು ಪ್ರಾರ್ಥಿಸುತ್ತಿದ್ದಾರೆ” ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
गरीबों के मसीहा राष्ट्रीय अध्यक्ष आदरणीय श्री लालू प्रसाद यादव जी को अस्वस्थ होने के चलते दिल्ली एम्स में भर्ती कराया गया है।
सभी बिहारवासियों की ईश्वर से प्रार्थना है कि लालू जी शीघ्र स्वस्थ्य हों।
#LaluPrasadYadav #RJD pic.twitter.com/xUdmHX13iE— Prince Yadav (@PrinceeRJD) July 23, 2024