ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್. ಎಂ.ಕೃಷ್ಣ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಎಸ್. ಎಂ.ಕೃಷ್ಣ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಶೀಘ್ರವೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.