ಮಂಡ್ಯ : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಇಂದು ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸೋಮನಹಳ್ಳಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಿಂದ ನೇರವಾಗಿ ಮಂಡ್ಯ ಜಿಲ್ಲೆಯ ಸೋಮನಹಳ್ಳಿಗೆ ಆಗಮಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಚಿವ ಚಲುವರಾಯಸ್ವಾಮಿ ಜೊತೆಗೆ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆಯು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನೆರವೇರಲಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿರುವ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.