ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ನಾಳೆ ಬೆಳಗ್ಗೆ 8 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಎಲ್ಲರಿಗೂ ಅಂತಿಮ ನಮನ ಸಲ್ಲಿಸಲು ಅವಕಾಶವಿದೆ, ನಾಳೆ ಬೆಳಿಗ್ಗೆ 8 ಗಂಟೆಗೆ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. 10.30ರ ವರೆಗೆ ಮದ್ದೂರಿಗೆ ಕರೆದುಕೊಂಡು ಹೋಗಿ, ಮಧ್ಯಾಹ್ನ 3 ಗಂಟೆಯವರೆಗೆ ಕುಟುಂಬದವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 4 ಗಂಟೆಗೆ ಸರ್ಕಾರಿ ಗೌರವ ಸಲ್ಲಿಸಿ ಅಂತಿಮ ಸಂಸ್ಕಾರ ನಡೆಯಲಿದೆ.
#WATCH | Bengaluru: On the demise of former Karnataka CM SM Krishna, Karnataka Dy CM DK Shivakumar, says "Till tomorrow at 8 am, everyone is allowed to pay the last respects at his residence in Bengaluru. At 8 am tomorrow, his mortal remains will be taken to Maddur, his native… pic.twitter.com/dpyPsT6ZaK
— ANI (@ANI) December 10, 2024