ಮೈಸೂರು : ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್ವಿ ದೇವರಾಜ್ ನಿಧನ ಹೊಂದಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ.
ಡಿ.3ರಂದು ಜನ್ಮದಿನ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಸದ್ಯ ವೈದ್ಯರು ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.
ಡಿಸಿಎಂ ಡಿಕೆಶಿ ಸಂತಾಪ
ಚಿಕ್ಕಪೇಟೆ ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶ್ರೀ ಆರ್.ವಿ.ದೇವರಾಜ್ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ರಾಜಕೀಯ ಮತ್ತು ಸಮಾಜಸೇವೆ ಮೂಲಕ ಚಿಕ್ಕಪೇಟೆ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದಾಗಿ ರಾಜ್ಯ ರಾಜಕಾರಣ ಮತ್ತು ಚಿಕ್ಕಪೇಟೆ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ. ದೇವರಾಜ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಸಂತಾಪ ಸೂಚಿಸಿದ್ದಾರೆ.
ಚಿಕ್ಕಪೇಟೆ ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶ್ರೀ ಆರ್.ವಿ.ದೇವರಾಜ್ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ರಾಜಕೀಯ ಮತ್ತು ಸಮಾಜಸೇವೆ ಮೂಲಕ ಚಿಕ್ಕಪೇಟೆ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದಾಗಿ ರಾಜ್ಯ ರಾಜಕಾರಣ ಮತ್ತು ಚಿಕ್ಕಪೇಟೆ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ. ದೇವರಾಜ್ ಅವರ ಆತ್ಮಕ್ಕೆ ಶಾಂತಿ… pic.twitter.com/SeIDjsDk21
— DK Shivakumar (@DKShivakumar) December 1, 2025








