ಬೆಂಗಳೂರು : ರಾಜ್ಯದ ಅರಣ್ಯ ಇಲಾಖೆ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ ಮಾಡಲಾಗುವುದು ಎಂದು ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ತಿಳಿಸಿದ್ದಾರೆ..
ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿಯಿದ್ದು, ಕಾಡಿನ ಬಗ್ಗೆ ಅಪಾರ ಪ್ರೀತಿಯಿದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.