ಬೆಂಗಳೂರು : ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗುಂಡಿನ ದಾಳಿಯಿಂದಾಗಿ ರಿಕ್ಕಿ ರೈ ರೈ ಮೂಗು, ಕೈ ಭಾಗಕ್ಕೆ ಗಂಭೀರವಾದ ಗಾಯವಾಗಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ರಾಮನಗರ ಜಿಲ್ಲೆಯ ಬಿಡದಿ ಠಾಣೆಯಲ್ಲಿ ರಿಕ್ಕಿ ರೈ ಕಾರು ಚಾಲಕ ಬಸವರಾಜ್ ಅವರು ನಾಲ್ವರ ವಿರುದ್ಧ ದೂರು ನೀಡಿದ್ದಾರೆ. ರಿಕ್ಕಿ ರೈ ಮೊದಲ ಪತ್ನಿ ಅನ್ನಪೂರ್ಣ, ರಾಕೇಶ್ ಮಲ್ಲಿ ಹಾಗೂ ನಿತೇಶ್ ಎಸ್ಟೇಟ್ ಕಂಪನಿ ವಿರುದ್ಧ ದೂರು ನೀಡಿದ್ದಾರೆ.
ಘಟನೆ ಹಿನ್ನೆಲೆ :
ರಾಮನಗರ ತಾಲೂಕಿನ ಬಿಡದಿ ಗೇಟ್ ಬಳಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ರಾತ್ರಿ ಮನೆ ಗೇಟ್ ಬಳಿ ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ ಆಗಿದ್ದು, ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮುತ್ತಪ್ಪ ರೈ. ಒಂದು ಸುತ್ತು ಫೈರಿಂಗ್ ನಡೆಸಿ ದುಷ್ಕರ್ಮಿ ಪರಾರಿಯಾಗಿದ್ದಾನೆ.
ಡ್ರೈವರ್ ಹಾಗೂ ಗನ್ ಮ್ಯಾನ್ ಜೊತೆಗೆ ಬಿಡದಿ ಮನೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಗುಂಡಿನ ದಾಳಿಯಾಗಿದೆ. ದಾಳಿ ವೇಳೆ ರಿಕ್ಕಿ ರೈ ಮೂಗು, ಕೈ ಭಾಗಕ್ಕೆ ಗಂಭೀರವಾದ ಗಾಯವಾಗಿದೆ. ಮಧ್ಯರಾತ್ರಿ 12.30 ರ ಸುಮಾರಿಗೆ ಘಟನೆ ನಡೆದಿದೆ. ಸ್ಥಳಕ್ಕೆ ಬಿಡದಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.