ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಅಕ್ರಮ ನಡೆದಿದೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್ ನನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಅವರ ಪಿಎ ಹರೀಶ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಇಂದು ಬೆಳ್ಳಂ ಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇ.ಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ವಿಜಯನಗರ, ಬಿ.ಇ ಎಲ್ ಸರ್ಕಲ್, ಜಗಜೀವನರಾಮನಗರ, ಕೋರಮಂಗಲ ಸೇರಿ ಹಲವು ಕಡೆ ಇ.ಡಿ ದಾಳಿ ನಡೆದಿದೆ.
ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆದಿದೆ. ವಾಲ್ಮೀಕಿ ನಿಗಮ ಅವ್ಯವಹಾರ ಸಂಬಂಧ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ನಗರದ ನೆಹರೂ ಕಾಲೋನಿಯಲ್ಲಿರುವ ನಾಗೇಂದ್ರ ಅವರ ನಿವಾಸದ ಮೇಲೂ ದಾಳಿ ನಡೆದಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ.