ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿಯಲಿರುವ ಸಂಸದ ಇ ತುಕಾರಾಂ ಹಾಗೂ ಕಾಂಗ್ರೆಸ್ ಶಾಸಕರಾದಂತಹ ನಾರಾ ಭರತ್ ರೆಡ್ಡಿ ಹಾಗೂ ಕಂಪ್ಲಿ ಗಣೇಶ ನಿವಾಸದ ಮೇಲೆ ಈಡಿಯಾಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಅಲ್ಲದೆ ಮಾಜಿ ಸಚಿವ ಬಿ ನಾಗೇಂದ್ರ ಅವರ ಪಿಎ ಗೋವರ್ಧನ ನಿವಾಸದ ಮೇಲು ದಾಳಿ ಮಾಡಿರುವ ಇಡಿ ಅಧಿಕಾರಿಗಳು ಇದೀಗ ಬೆಂಗಳೂರಿನ ಶಾಸಕರ ಭವನದಲ್ಲಿರುವ ಬಿ.ನಾಗೇಂದ್ರ ಕೊಠಡಿಯಲ್ಲೂ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಮಾಜಿ ಸಚಿವ ನಾಗೇಂದ್ರರಿಗೆ ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರಿನ ಶಾಸಕರ ಭವನದಲ್ಲಿ ನಾಗೇಂದ್ರ ಕೊಠಡಿಯಲ್ಲಿ ಇಡಿ ಅಧಿಕಾರಿಗಳು ಇದೀಗ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ