ಬೆಂಗಳೂರು : ಹೊಳೆನರಸೀಪರುದಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂದ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಜನಪ್ರತಿನಿಧಿಗಳ ವಿಶೇ಼ಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲಿ ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ನಡೆದಿದ್ದು, ರೇವಣ್ಣಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಜಾಮೀನು ಅರ್ಜಿ ಸಂಬಂಧ ವಿಶೇಷ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿದ್ದು, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತ್ತು. ಇಂದು ಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ಲೈಂಗಿಕ ದೌರ್ಜನ್ಯ ಆರೋಪದಡಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರದಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ಹೇಳಿಕೆ ಆಧರಿಸಿ ಪೊಲೀಸರು ಎಫ್ ಐಆರ್ ನಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ ಸೆಕ್ಷನ್ ಸೇರ್ಪಡೆ ಮಾಡಿದ್ದಾರೆ. ಪ್ರಕರಣದ ಎರಡನೇ ಆರೋಪಿಯಾಗಿರುವ ಹೆಚ್.ಡಿ. ರೇವಣ್ಣಗೆ ಕೋರ್ಟ್ ಜಾಮೀನು ನೀಡಿದೆ.