ತುಮಕೂರು : ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು 7 ನೇ ಬಾರಿ ‘ಡಿಸಿಸಿ ಬ್ಯಾಂಕ್’ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಕೆಎನ್ ರಾಜಣ್ಣ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅವಿರೋಧವಾಗಿ ಆಯ್ಕೆ ಆದರು. 14 ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದಿತ್ತು. 8 ನಿರ್ದೇಶಕರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಬಿಜೆಪಿ ಸೇರಿದಂತೆ ಯಾವುದೇ ಪಕ್ಷಕ್ಕೂ ನಾನು ಸೇರ್ಪಡೆಯಾಗುವುದಿಲ್ಲ , ನನ್ನ ರಾಜಕೀಯ ಕಾಂಗ್ರೆಸ್ ಪಕ್ಷದಲ್ಲಿಯೇ ಪೂರ್ಣಗೊಳ್ಳಲಿದೆ ಎಂದು ಮಾಜಿ ಸಹಕಾರ ಸಚಿವ ಕೆ ಎನ್ ರಾಜಣ್ಣ ತಿಳಿಸಿದ್ದಾರೆ.