ದಾವಣಗೆರೆ: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ (90) ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಮೋತಿ ವೀರಣ್ಣ ಅವರು 1989ರಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2004ರಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಧರ್ಮದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.
ದಾವಣಗೆರೆಯ ಎಂಸಿಸಿ ಬಿ ಬ್ಲಾಕ್ ನಲ್ಲಿರುವ ಅವರ ಮಾತೆ ಗೌರಿ ನಿವಾಸದಲ್ಲಿ ಮೃತದೇಹದ ಅಂತಿಮ ನಮನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಸಂಜೆ 4 ಗಂಟೆಗೆ ಹದಡಿ ರಸ್ತೆಯಲ್ಲಿರುವ ಯಜಮಾನ್ ಮೋತಿ ದೊಡ್ಡಪ್ಪ ಟ್ರಸ್ಟ್ ನಿವೇಶನದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.








