ಚಿಕ್ಕಬಳ್ಳಾಪುರ : ಮಾಜಿ ಎಂಎಲ್ಸಿ ವೈ.ಎ ನಾರಾಯಣಸ್ವಾಮಿ ಸಂಬಂಧಿಯಿಂದ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ಗುಂಡಿನ ದಾಳಿಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಎಂಬಲ್ಲಿ ನಡೆದಿದೆ.
ಸರ್ಕಾರಿ ಜಾಗದಲ್ಲಿ ಕ್ರಷರ್ ನಿರ್ಮಾಣಕ್ಕೆ ರಸ್ತೆ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಇಂದು ಮಂಚೇನಹಳ್ಳಿಯಲ್ಲಿ ಸ್ಥಳೀಯರು ಪ್ರತಿಭಟನೆ ಮಾಡುತ್ತಿದ್ದರು. ಈ ವೇಳೆ ಮಾಜಿ ಎಂಎಲ್ಸಿ ವೈ.ಎ ನಾರಾಯಣಸ್ವಾಮಿ ಸಂಬಂಧಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗೂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಚಿಕನ್ ರವಿ ಎಂಬುವವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.