ಬೆಂಗಳೂರು: ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಹಾಗೂ ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ. ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದು, ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಪಕ್ಷದ ಬಾವುಟ ನೀಡಿಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.








