ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಪ್ರಜ್ವಲ್‌ ರೇವಣ್ಣಗೆ ಕೋರ್ಟ್‌ ಶಾಕ್‌ ನೀಡಿದ್ದು, ಪ್ರಜ್ವಲ್‌ ರೇವಣಣರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ.

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ ಐಟಿ ಕಸ್ಟಡಿ ಇಂದು ಅಂತ್ಯವಾಗಿದ್ದು. ಹೀಗಾಗಿ ಆರೋಪಿಯನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಪೂರ್ಣಗೊಂಡಿದೆ. ಅಲ್ಲದೇ, ಈಗ ಸಿಐಡಿಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಮತ್ತೆ ಕಸ್ಟಡಿಗೆ ಎಸ್ ಐಟಿ ಕಸ್ಟಡಿಗೆ ಪಡೆದಿದೆ.

ಅಧಿಕಾರಿಗಳು ಒಂದು ಪ್ರಕರಣ ಮುಗಿಯುತ್ತಿದ್ದಂತೆ ಮತ್ತೊಂದು ಪ್ರಕರಣವನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಪ್ರತಿಯೊಂದು ಪ್ರಕರಣದಲ್ಲಿ ಕಸ್ಟಡಿಗೆ ಪಡೆದು ಪ್ರತ್ಯೇಕವಾಗಿ ತನಿಖೆ ನಡೆಸಲಾಗುವುದು. ಈಗ ಇನ್ನೊಂದು ಪ್ರಕರಣದಲ್ಲಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಎಸ್‌ ಐಟಿ ಕೋರ್ಟ್‌ ಗೆ ಕೇಳಿತ್ತು. ಇದೀಗ ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

Share.
Exit mobile version