ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಜ್ವರ ಹಾಗೂ ತುಸು ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಗುಣಮುಖರಾಗಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯಸಭೆ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಅಲ್ಲಿನ ತೀವ್ರ ಚಳಿ ಹಾಗೂ ಮಾಲಿನ್ಯದಿಂದ ದೇವೇಗೌಡರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಜ್ವರ ಹಾಗೂ ಕಫದ ತೊಂದರೆಯಿಂದಾಗಿ ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಮನೆಯಲ್ಲಿಯೇ ದುಡಿಯುವ ‘ಮಹಿಳೆಯ’ ಕೆಲಸ ಅಮೂಲ್ಯವಾದದು, ಅದಕ್ಕೆ ಬೆಲೆ ಕಟ್ಟಲಾಗದು: ಸುಪ್ರಿಂಕೋರ್ಟ್
ಡಾ. ಸತ್ಯನಾರಾಯಣ ಮೈಸೂರು ನೇತೃತ್ವದ ತಂಡದಿಂದ ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದ ಹಿನ್ನೆಲೆಯಲ್ಲಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಪದ್ಮನಾಭನಗರದ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಆಯುಷ್ ಚಿಕಿತ್ಸಾಲಯಗಳಲ್ಲಿ ದಿನಕ್ಕೆ ಎರಡು ಬಾರಿ ಉಚಿತ ಯೋಗ ತರಬೇತಿ ಜಾರಿ : ದಿನೇಶ್ ಗುಂಡೂರಾವ್
ಇದಕ್ಕೂ ಮೊದಲು ದೇವೇಗೌಡರು ಆಸ್ಪತ್ರೆಗೆ ದಾಖಲಾದಾಗ ಆತಂಕ ಉಂಟಾಗಿತ್ತು. ಈ ವೇಳೆ ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಶೀಘ್ರವಾಗಿ ಮನೆಗೆ ಮರಳುವುದಾಗಿ ಹಾಗೂ ಆರೋಗ್ಯದ ಬಗ್ಗೆ ಯಾರು ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ದೇವೇಗೌಡರು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದರು.
2036ರ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಕಾರ್ಯೋನ್ಮುಖವಾಗಿದೆ: ಪ್ರಧಾನಿ ಮೋದಿ