ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಗುರುವಾರ ದೆಹಲಿಯಲ್ಲಿ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ, “ಪ್ರಧಾನಿ ಮನಮೋಹನ್ ಸಿಂಗ್ ಜಿ ಅವರ ನಿಧನದ ಸುದ್ದಿ ತಿಳಿದು ನನಗೆ ತೀವ್ರ ದುಃಖವಾಗಿದೆ” ಎಂದು ನಿಧನದ ಸುದ್ದಿಯನ್ನ ದೃಢಪಡೆಸಿದ್ದಾರೆ.
“ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಆಳವಾದ ಸಂತಾಪಗಳು. ನಮ್ಮ ರಾಷ್ಟ್ರಕ್ಕೆ ನಿಮ್ಮ ಸೇವೆಗಾಗಿ ಧನ್ಯವಾದಗಳು. ನಿಮ್ಮ ಆರ್ಥಿಕ ಕ್ರಾಂತಿ ಮತ್ತು ನೀವು ದೇಶಕ್ಕೆ ತಂದ ಪ್ರಗತಿಪರ ಬದಲಾವಣೆಗಳಿಗಾಗಿ ನಿಮ್ಮನ್ನು ಯಾವಾಗಲೂ ನೆನಪಿಸಿಕೊಳ್ಳಲಾಗುತ್ತದೆ” ಎಂದು ವಾದ್ರಾ ಹೇಳಿದ್ದಾರೆ.
ಅಂದ್ಹಾಗೆ, ಮಾಜಿ ಪ್ರಧಾನಿ ಸಿಂಗ್ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಗುರುವಾರ ಸಂಜೆ ದೆಹಲಿಯ ಏಮ್ಸ್’ಗೆ ದಾಖಲಾಗಿತ್ತು. ಮಾಜಿ ಪ್ರಧಾನಿಯನ್ನ ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಈ ಐದು ದಾಖಲೆ ಅಪ್ ಲೋಡ್ ಮಾಡಿ, ಇ-ಖಾತಾ ಪಡೆಯಿರಿ








