ಪುಣೆ: ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಕಲ್ಮಾಡಿ (81 ) ಮಂಗಳವಾರ ಪುಣೆಯಲ್ಲಿ ನಿಧನರಾಗಿದ್ದಾರೆ.
ಕಲ್ಮಾಡಿ ಅವರು ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಪಕಾಲದ ಅನಾರೋಗ್ಯದ ನಂತರ ಅವರು ನಿಧನರಾದರು ಎಂದು ಅವರ ಕುಟುಂಬ ತಿಳಿಸಿದೆ.
ಅವರ ಕಚೇರಿಯ ಅಧಿಕೃತ ಹೇಳಿಕೆಯ ಪ್ರಕಾರ, ಕಲ್ಮಾಡಿ ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 2 ಗಂಟೆಯವರೆಗೆ ಎರಾಂಡ್‌ವಾನೆಯ ಕಲ್ಮಾಡಿ ಹೌಸ್‌ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಮಂಗಳವಾರ ಮಧ್ಯಾಹ್ನ 3.30 ಕ್ಕೆ ನವಿ ಪೇತ್‌ನಲ್ಲಿರುವ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.








