ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಸಿಪಿಎಂ ಮುಖಂಡ ಬುದ್ಧದೇವ್ ಭಟ್ಟಾಚಾರ್ಯ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಗುರುವಾರ ಬೆಳಿಗ್ಗೆ ಕಲ್ಕತ್ತಾದಲ್ಲಿ ನಿಧನರಾಗಿದ್ದಾರೆ.
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಸಿಪಿಎಂ ಮುಖಂಡ ಬುದ್ಧದೇವ್ ಭಟ್ಟಾಚಾರ್ಯ ಅವರು ನಿಧನರಾಗಿದ್ದಾರೆ ಎಂದು ಅವರ ಪುತ್ರ ಸುಚೇತನ್ ಭಟ್ಟಾಚಾರ್ಯ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ಬಂಗಾಳದಲ್ಲಿ 34 ವರ್ಷಗಳ ಎಡರಂಗದ ಆಡಳಿತದಲ್ಲಿ, ಭಟ್ಟಾಚಾರ್ಯ ಅವರು 2000 ರಿಂದ 2011 ರವರೆಗೆ ಸತತ 11 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಎರಡನೇ ಮತ್ತು ಕೊನೆಯ ಸಿಪಿಎಂ ಮುಖ್ಯಮಂತ್ರಿಯಾಗಿದ್ದರು. ಜುಲೈ 29, 2023 ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಭಟ್ಟಾಚಾರ್ಯ ಅವರನ್ನು ಕಲ್ಕತ್ತಾದ ಅಲಿಪೋರ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ನ್ಯುಮೋನಿಯಾಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ಚಿಕಿತ್ಸೆ ಫಲಿಕಾರಿಯಾಗದೇ ಇಂದು ನಿಧನರಾಗಿದ್ದಾರೆ.