Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ‘PSI’ ಸಮವಸ್ತ್ರ ಧರಿಸಿ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳು ಅರೆಸ್ಟ್ !
KARNATAKA

BREAKING : ಬೆಂಗಳೂರಲ್ಲಿ ‘PSI’ ಸಮವಸ್ತ್ರ ಧರಿಸಿ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳು ಅರೆಸ್ಟ್ !

By kannadanewsnow57

ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ವೇಷದಲ್ಲಿ ಬಂದು ಮನೆಯವರನ್ನು ಬೆದರಿಸಿ ಲಕ್ಷಾಂತರ ರೂಪಾಯಿ ನಗದು ಹಾಗೂ ಚಿನ್ನಾಭರಣ ದೋಚಿದ್ದ ನಾಲ್ವರು ಖದೀಮರನ್ನು ಬ್ಯಾಡರಹಳ್ಳಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ.

ಸ್ನೇಹಿತನೇ ಸ್ಕೆಚ್ ಹಾಕಿದ ‘ಮಾಸ್ಟರ್ ಮೈಂಡ್’!

ಈ ದರೋಡೆಯ ಹಿಂದೆ ಸಂತ್ರಸ್ತ ಹೊಂಬಾಳೆಗೌಡರ ಆಪ್ತ ಸ್ನೇಹಿತ ಬೆಟ್ಟೇಗೌಡನ ಕುತಂತ್ರವಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹೊಂಬಾಳೆಗೌಡರು ಇತ್ತೀಚೆಗಷ್ಟೇ ಸೈಟ್ ಮಾರಾಟ ಮಾಡಿ ಮನೆಯಲ್ಲಿ ದೊಡ್ಡ ಮೊತ್ತದ ಹಣ ಇಟ್ಟಿದ್ದನ್ನು ಗಮನಿಸಿದ್ದ ಬೆಟ್ಟೇಗೌಡ, ಅದನ್ನು ಲೂಟಿ ಮಾಡಲು ಸಂಚು ರೂಪಿಸಿದ್ದನು.

ಘಟನೆ ಹಿನ್ನೆಲೆ

ದರೋಡೆಗಾಗಿ ಪೆರೋಲ್ ಮೇಲೆ ಹೊರಬಂದಿದ್ದ ಕುಖ್ಯಾತ ಆರೋಪಿ ನಾಗೇಂದ್ರನನ್ನು ಬಳಸಿಕೊಳ್ಳಲಾಗಿತ್ತು. ನಾಗೇಂದ್ರ ಪಿಎಸ್‌ಐ ಸಮವಸ್ತ್ರ ಧರಿಸಿ ಅಧಿಕಾರಿಯಂತೆ ಮನೆಗೆ ನುಗ್ಗಿದ್ದನು. ಮನೆಯವರ ಕೈಕಾಲುಗಳಿಗೆ ಟೇಪ್ ಸುತ್ತಿ, ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳನ್ನು ತೋರಿಸಿ ಜೀವ ಬೆದರಿಕೆ ಹಾಕಿದ್ದ ಈ ಗ್ಯಾಂಗ್, ಒಟ್ಟು 20 ಲಕ್ಷ ರೂಪಾಯಿ ನಗದು ಮತ್ತು 677 ಗ್ರಾಂ ಚಿನ್ನವನ್ನು ದೋಚಿ ಪರಾರಿಯಾಗಿತ್ತು.

ಪೊಲೀಸ್ ಕಾರ್ಯಾಚರಣೆ ಮತ್ತು ಜಪ್ತಿ
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬ್ಯಾಡರಹಳ್ಳಿ ಪೊಲೀಸರು, ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ದಾಖಲೆಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸಿದರು.
ಬಂಧಿತರು: ನಾಗೇಂದ್ರ, ಬೆಟ್ಟೇಗೌಡ, ಬಚ್ಚನ್ ಸೇರಿದಂತೆ ನಾಲ್ವರು.

ವಶಪಡಿಸಿಕೊಂಡ ಸ್ವತ್ತು: ಆರೋಪಿಗಳಿಂದ 10 ಲಕ್ಷ ರೂ. ನಗದು ಮತ್ತು 429 ಗ್ರಾಂ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸದ್ಯ ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ಮುಂದುವರಿದಿದೆ.

BREAKING: Four accused arrested for breaking into a house and stealing while wearing PSI uniforms in Bengaluru!
Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

1 Min Read

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

1 Min Read

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

2 Mins Read
Recent News

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

State News
KARNATAKA

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

By ವಸಂತ ಬಿ ಈಶ್ವರಗೆರೆ KARNATAKA 1 Min Read

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರವೊಂದನ್ನು…

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.