ಕೋಲಾರ : ಬೊಲೆರೋ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್ ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಈ ಒಂದು ಭೀಕರ ರಸ್ತೆ ಅಪಘಾತ ನಡೆದಿದೆ.ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್ ವಡ್ಡಹಳ್ಳಿಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಮೃತರನ್ನು ಕೋನಗುಂಟೆ ಗ್ರಾಮದ ರಾಧಪ್ಪ (45) ವೆಂಕಟರಾಮಪ್ಪ (45) ವೆಂಕಟರಾಮಪ್ಪನ ಪತ್ನಿ ಅಲುವೇಲಮ್ಮ (30) ಹಾಗೂ ಅವರ ಜೊತೆಗೆ ಇಬ್ಬರು ಅಪರಿಚಿತರು ಕೂಡ ಸಾವನ್ನಪ್ಪಿದ್ದರೆ.. ಇನ್ನೋರ್ವ ವ್ಯಕ್ತಿಗೆ ಗಂಭೀರವಾದ ಗಾಯವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.