ಉತ್ತರಕನ್ನಡ : ಉತ್ತರಕನ್ನಡದಲ್ಲಿ ಘೋರ ಘಟನೆ ನಡೆದಿದ್ದು, ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ನಾಲ್ವರು ನಾಪತ್ತೆಯಾಗಿದ್ದು, ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಬಳಿ ಈ ಒಂದು ಘಟನೆ ನಡೆದಿದೆ.
ಆರು ಜನರು ಮೀನುಗಾರಿಕೆಗಾಗಿ ತೆರಳಿದ್ದಾಗ ಬೋಟ್ ಮಗುಚಿ ಬಿದ್ದಿದೆ ಈ ವೇಳೆ ಸ್ಥಳೀಯ ನಿವಾಸಿಗಳು ಕೂಡಲೇ ಇಬ್ಬರೂ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಆದರೆ ಉಳಿದ ನಾಲ್ವರು ನಾಪತ್ತೆಯಾಗಿದ್ದು, ನಾಲ್ವರಿಗಾಗಿ ಕರಾವಳಿ ಕಾವಲು ಪಡೆ ಇದೀಗ ಹುಡುಕಾಟ ನಡೆಸುತ್ತಿದೆ. ಘಟನೆ ಕುರಿತಂತೆ ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.