ಚಿಕ್ಕಮಗಳೂರು : ಲಾರಿಗೆ ಓಮ್ನಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಣಕಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು. ಲಾರಿಗೆ ಓಮಿನಿ ಕಾರ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಧರ್ಮಸ್ಥಳದಿಂದ ವಾಪಸ್ ಬರುವಾಗ ಈ ಅವಘಡ ಸಂಭವಿಸಿದೆ ಮಂಜುನಾಥನ ದರ್ಶನ ಪಡೆದು ವಾಪಸ್ ಬರುತ್ತಿದ್ದರು ಎಂದು ಹೇಳಲಾಗುತ್ತಿದೆ. ಚಿತ್ರದುರ್ಗದ ನಾಲ್ವರು ಸಾವನಪ್ಪಿದ್ದು ಮೂವರು ಗಾಯಗೊಂಡಿದ್ದು ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರೆಲ್ಲರೂ ಚಿತ್ರದುರ್ಗದ ಮೂಲದವರು ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.