ರಾಯಚೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಗ್ರಾಮದ ಬಳಿ ಘಟನೆ ನಡೆದಿದೆ.
ಗೂಡ್ಸ್ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರನ್ನು ನಾಗರಾಜ್ (28) ಸೋಮು (38) ನಾಗಭೂಷಣ್ (36) ಹಾಗೂ ಮುರಳಿ (38) ಎಂದು ತಿಳಿದುಬಂದಿದೆ.
ಮೃತಪಟ್ಟ ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಇನ್ನು ಗೂಡ್ಸ್ ಪಿಕಪ್ ವಾಹನ ಚಾಲಕ ಆನಂದ್ ಗೆ ಗಂಭೀರವಾದ ಗಾಯಗಳಾಗಿವೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಕುರಿ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಕುರಿತು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.