ವಿಜಯಪುರ : ವಿಜಯಪುರ ಜಿಲ್ಲೆಯ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಕಾರು-ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ವಿಜಯಪುರ ಮೂಲದವರಾಗಿದ್ದು, ಇಬ್ಬರು ಪುರುಷರು, ಓರ್ವ ಮಹಿಳೆ ಹಾಗೂ ಓರ್ವ ಬಾಲಕ ಸಾವನ್ನಪ್ಪಿದ್ದು, ಘಟನಾ ಸ್ಥಳಲ್ಕೆ ಬಬಲೇಶ್ವರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.