ಟೆಹ್ರಾನ್: ಇರಾನ್‌ನಲ್ಲಿ ಸಂಭವಿಸಿದ ಭೀಕರ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ನಾಲ್ವರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಹೆಲಿಕಾಪ್ಟರ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಇರಾನ್ ರಕ್ಷಣಾ ಪಡೆಗಳು ಮತ್ತು ತುರ್ತು ನಿರ್ವಹಣಾ ತಂಡಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.








