ಬೆಂಗಳೂರು : ರಾಜ್ಯದಲ್ಲಿ ಇಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಪತಿ ಅನೂಪ್ ಕುಮಾರ್, ಪತ್ನಿ ರಾಖಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೌದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ದಂಪತಿಗಳಾದ ಅನುಪ್ ಕುಮಾರ್ ಹಾಗೂ ಪತ್ನಿ ರಾಖಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ಸ್ಥಳಕ್ಕೆ ಸದಾಶಿವನಗರ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.ಯಾವ ಕಾರಣಕ್ಕಾಗಿ ಇಬ್ಬರು ಮಕ್ಕಳನ್ನು ಕೊಂದು ದಂಪತಿಗಳು ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದರ ಕುರಿತು ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.