ಮೈಸೂರು : ಮೈಸೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮೈಸೂರಿನ ವಿಶ್ವೇಶ್ವರ ನಗರದಲ್ಲಿ ಚೇತನ್, ರೂಪಾಲಿ, ಮಗು ಹಾಗೂ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊದಲು ಮನೆಯ ಯಜಮಾನ ಚೇತನ್ ರೂಪಾಲಿ ಮಗು, ತಾಯಿಗೆ ವಿಷ ನೀಡಿದ್ದಾರೆ. ಬಳಿಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸದ್ಯ ಡೆತ್ ನೋಟ್ ಪತ್ತೆಯಾಗಿದ್ದು, ನಮ್ಮ ಸಾವಿಗೆ ಯಾರೂ ಕಾರಣರಲ್ಲ, ಹಣಕಾಸಿನ ಸಮಸ್ಯೆಯಿಂದಾಗಿ ನಾವು ಸಾಯುತ್ತಿದ್ದೇವೆ. ನನ್ನ ಸ್ನೇಹಿತರು, ಸಂಬಂಧಿಕರಿಗೆ ಯಾರೂ ತೊಂದರೆ ಕೊಡಬೇಡಿ. I AM SORRY ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎಂದು ಹೇಳಲಾಗಿದೆ.
ಮಗ ಕುಶಾಲ್ (15), ಚೇತನ್ (45), ರೂಪಾಲಿ (43) ಹಾಗೂ ತಾಯಿ ಪ್ರಿಯಂವಧಾ (62) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರ ಇನ್ಸ್ಪೆಕ್ಟರ್ ಮೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.