ಮೈಸೂರು : ಮೈಸೂರಿನಲ್ಲಿ ಇಂದು ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ಯರೆಗನಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, ಬಟ್ಟೆ ಐರನ್ ಮಾಡುತ್ತಿದ್ದ ಮಂಜುಳ (39), ಕುಮಾರಸ್ವಾಮಿ (45) ಹಾಗೂ ಅರ್ಚನಾ (19), ಸ್ವಾತಿ (17) ಎಂಬುವರ ಶವಗಳು ಪತ್ತೆಯಾಗಿವೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.