ಚಿತ್ರದುರ್ಗ : ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮವಾಗಿ ಸೇತುವೆ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣೆ ಕೆರೆ ಎಂಬಲ್ಲಿ ನಡೆದಿದೆ.
ಒಂದೇ ಕುಟುಂಬದ ನಾಲ್ವರು ಅಪಘಾತದಲ್ಲಿ ಸಾವನ್ನಪ್ಪಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಎಂಬಲ್ಲಿ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಲಿಂಗಪ್ಪ (26) ಸಿಂಧುಶ್ರೀ (2) ಐದು ತಿಂಗಳ ಹಯ್ಯಳಪ್ಪ, ಮೂರು ತಿಂಗಳ ಮಗು ರಶ್ಮಿ ಸಾವನಪ್ಪಿದ್ದು ಉಳಿದ ಮೂವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಮೂವರು ಪುಟ್ಟ ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಚಾಲಕನ ನಿಯಂತ್ರಣ ತಪ್ಪಿ, ಸೇತುವೆಗೆ ಕಾರು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.ಈ ಒಂದು ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವಣ್ಣಪ್ಪಿದ್ದಾರೆ. ಘಟನಾಸ್ಥಳಕ್ಕೆ ಚಳಕೆರೆ ತಾಲ್ಲೂಕಿನ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಘಟನೆ ಕೊಡುತಂತೆ ಪರಿಶೀಲನೆ ನಡೆಸುತ್ತಿದ್ದಾರೆ. ಕಡೆ ಕುರಿತಂತೆ ಪ್ರಕರಣ ದಾಖಲಾಗಿದೆ.