ಬೆಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಅವಗಡ ಸಂಭವಿಸಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ಬಳಿ ಒಂದು ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಈ ಅಗ್ನಿ ದುರಂತ ಸಂಭವಿಸಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿ ಚಲಿಸುತ್ತಿದ್ದ ನಾಲ್ವರು ತಕ್ಷಣ ಹೊರಗಡೆ ಬಂದಿದ್ದಾರೆ. ಕಾರಿನಲ್ಲಿ ತೆರಳುತ್ತಿದ್ದ ನಾಲ್ವರು ಸದ್ಯ ಯಾವುದೇ ಅಪಾಯವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳೀಯ ನಿವಾಸಿಗಳು ಬೆಂಕಿ ಹೊತ್ತಿಕೊಂಡಿದ್ದ ಕಾರನ್ನು ನಂದಿಸಿದ್ದಾರೆ. ಹುಳಿಮಾವು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.