ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಬೀದಿ ನಾಯಿ ಕಚ್ಚಿದ ಪರಿಣಾಮ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಕೊರವಿಹಾಳ ಗ್ರಾಮದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಬೀದಿ ನಾಯಿ ದಾಳಿ ನಡೆದಿ ೧೫ ದಿನಗಳ ಹಿಂದ ಏಳು ಮಕ್ಕಳಿಗೆ ಬೀದಿ ನಾಯಿ ಕಚ್ಚಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ಸಾಗಿದ್ದ ಬಾಲಕಿ ಲಾವಣ್ಯ ಸಾವನ್ನಪ್ಪಿದ್ದು, ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಕಳೆದ ಕೆಲ ದಿನಗಳಿಂದ ಲಾವಣ್ಯ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು, ಆದರೆ ಇಂದು ಸಾವನ್ನಪ್ಪಿದ್ದಾಳೆ. ಲಾವಣ್ಯ ಸಾವಿನಿಂದ ನಾಯಿ ಕಚ್ಚಿದ ೭ ಮಕ್ಕಳ ಪೋಷಕರಿಗೆ ಇದೀಗ ಆತಂಕ ಶುರುವಾಗಿದೆ.