ಬೆಂಗಳೂರು : ಬೆಂಗಳೂರಿನಲ್ಲಿ ವಂಚನೆ ಆರೋಪ ಪ್ರಕರಣ ಸಂಬಂಧ ಐಶ್ವರ್ಯಾಗೌಡ ವಿರುದ್ಧದ ಎಲ್ಲಾ ಕೇಸ್ ಗಳು ಸಿಐಡಿಗೆ ವರ್ಗಾಯಿಸಲಾಗಿದೆ.
ಹೌದು, ವಂಚನೆ ಪ್ರಕರಣ ಸಂಬಂಧ ರಾಜ್ಯದ ವಿವಿಧೆಡೆ ಐಶ್ವರ್ಯಾಗೌಡ ವಿರುದ್ಧ ದಾಖಲಾದ ಪ್ರಕರಣಗಳನ್ನು ಸಿಐಡಿಗೆ ವರ್ಗಾಯಿಸಲಾಗಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರ, ಚಂದ್ರಾಲೇಔಟ್ ಹಾಗೂ ಮಂಡ್ಯ ಜಿಲ್ಲೆಯಲ್ಲಿ ದಾಖಲಾಗಿರುವ ವಂಚನೆ ಪ್ರಕರಣಗಳನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಈಗಾಗಲೇ ವಂಚನೆ ಪ್ರಕರಣದ ಬಗ್ಗೆ ಬ್ಯಾಟರಾಯನಪುರ ಉಪವಿಭಾಗದ ಎಸಿಪಿ ಭರತ್ ರೆಡ್ಡಿ ತನಿಖೆ ನಡೆಸಿದ್ದರು. ಇದೀಗ ಈ ಎಲ್ಲಾ ಪ್ರಕರಣಗಳನ್ನು ಸಿಐಡಿ ಆರ್ಥಿಕ ಅಪರಾಧ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.