ಬೆಂಗಳೂರು : ಬೆಂಗಳೂರಿನಲ್ಲಿ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳೇ ಶಾಲೆ 4 ಕೋಟಿ ರೂಪಾಯಿ ನುಂಗಿ ನೀರು ಕುಡಿದಿದ್ದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಒಟ್ಟು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಸಾಗರ್ ಮತ್ತು ಮನೋಜ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.
ಹೌದು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಶಾಲೆಗೆ ಆರೋಪಿಗಳು 2017ರಿಂದ 4 ಕೋಟಿ ರೂ. ವಂಚಿಸಿದ್ದಾರೆ. ವಿದ್ಯಾರ್ಥಿಗಳ ಶುಲ್ಕದ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದಾರೆ. ಶಾಲೆ & ಟ್ರಸ್ಟ್ ನಲ್ಲಿ ಅಕೌಂಟೆಂಟ್ಸ್, ಟ್ರಾನ್ಸ್‌ಪೋರ್ಟ್ ಇನ್ಚಾರ್ಜ್ ಆಗಿದ್ದ ಸಾಗರ್, ಮುರುಳಿ, ಮನೋಜ್, ಮೋಹನ್ ಮತ್ತು ಕಿಶೋರ್ ಎಂಬವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸಿಸಿಬಿಗೆ (CCB) ದೂರು ನೀಡಿದ್ದರು. ದೂರಿನಡಿ ಎಫ್‍ಐಆರ್ ದಾಖಲಿಸಿಕೊಂಡು, ಸಾಗರ್ ಮತ್ತು ಮನೋಜ್‍ನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ








