ಹಾಸನ: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ (93) ಅವರು ವಯೋಸಹಜ ಅನಾರೋಗ್ಯದಿಂದ ಮಂಗಳವಾರ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರಿಗೆ ಪತ್ನಿ, ಒಬ್ಬ ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಚಾಮರಾಜನಗರ ಜಿಲ್ಲೆ ಅಂಗಳ ಗ್ರಾಮದ ಎಚ್.ಎಂ.ಶಿವಣ್ಣ 1932ರ ಮಾರ್ಚ್ 1ರಂದು ಜನಿಸಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಸೆರೆವಾಸ ಅನುಭವಿಸಿದ್ದರು.ಐದು ದಶಕಗಳಿಂದ ಹಾನದಲ್ಲಿ ನೆಲೆಸಿದ್ದರು. ಹೋಂಗಾರ್ಡ್ ಕಮಾಂಡೆಂಟ್ ಆಗಿ ಸೇವೆ ಸಲ್ಲಿಸಿದ್ದರು.
ಸ್ವಾತಂತ್ರ್ಯ ಹೋರಾಟ ಸಂಗ್ರಾಮದ ನೆನಪಿನ ಕೊಂಡಿಯಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ.ಶಿವಣ್ಣ ನಿಧನಕ್ಕೆ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಅವರಿ ಸಂತಾಪ ಸೂಚಿಸಿದ್ದಾರೆ.







