ಬೆಂಗಳೂರು : ರಾಜ್ಯದಲ್ಲಿ ನಡೆಸಲಾಗುವ ಜಯಂತಿ ಹಾಗೂ ಉತ್ಸವಗಳಲ್ಲಿ ಡಿಜೆ ಸೌಂಡ್, ಐಟಂ ಸಾಂಗ್ ಬ್ಯಾನ್ ಮಾಡುವ ಬಗ್ಗೆ ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಕೆಲ ಸದಸ್ಯರಿಂದಲೇ ಒತ್ತಾಯ ಕೇಳಿ ಬಂದಿದೆ.ಈ ಹಿನ್ನೆಲೆ ರಾಜ್ಯ ಸರ್ಕಾರ ಇನ್ಮುಂದೆ ಧಾರ್ಮಿಕ ಕಾರ್ಯಕ್ರಮಗಳಾಗಿರಬಹುದು, ಜಯಂತಿ ಹಾಗೂ ಉತ್ಸವಗಳಲ್ಲಿ ಡಿಜೆ ಬ್ಯಾನ್ ಮಾಡುವ ಕುರಿತು ಚಿಂತನೆ ನಡೆಸುತ್ತಿದೆ.
ಇದೇ ವೇಳೆ ಬಿಜೆಪಿಯವರು ಸಹಕರಿಸಿದರೆ ಡಿಜೆ ಬ್ಯಾನ್ ಮಾಡಿ ಆದೇಶಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ ಹೇಳಿದ ಪ್ರಸಂಗವೂ ಜರುಗಿತು. ಬುಧವಾರ ಪ್ರಶೋತ್ತರ ಕಲಾಪದಲ್ಲಿ ಪ್ರತಿ ಜಿಲ್ಲೆಯಲ್ಲಿ ಉತ್ಸವ ನಡೆಸುವ ಬಗ್ಗೆ ನಡೆದ ಚರ್ಚೆ ವೇಳೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಈ ವಿಚಾರ ಪ್ರಸ್ತಾ ಪಿಸಿ, ರಾಜ್ಯದಲ್ಲಿ ನಡೆಯುವ ವಿವಿಧ ಜಯಂತಿ, ಉತ್ಸವಗ ಳಲ್ಲಿ ಡಿಜೆ, ಐಟಂ ಸಾಂಗ್‌ಗಳಿಂದ ಸಮಸ್ಯೆಯಾಗಿದೆ. ಐಟಂ ಸಾಂಗ್ ಇಲ್ಲದೇ ದೇವರ ಮೆರವಣಿಗೆ ಇಲ್ಲ ಎನ್ನುವ ಸ್ಥಿತಿ ಇದೆ. ಇದು ನಿಜಕ್ಕೂ ಅಸಹ್ಯ. ಹೀಗಾಗಿ ಡಿಜೆ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯದ ವಿವಿಧೆಡೆ ನಡೆಯುವ ಸಾಂಸ್ಕೃತಿಕ ಉತ್ಸವಗಳಿಗೆ ಸ್ಥಳೀಯ ಕಲೆಗಳು ಮತ್ತು ಕಲಾವಿದರಿಗೆ ಆದ್ಯತೆ ನೀಡಬೇಕು. ಅವಕಾಶ ಕೊಡುವುದರಿಂದ ಅವರ ಆರ್ಥಿಕ ಸ್ಥಿತಿಯು ಸುಧಾರಿಸಲಿದೆ. ಈ ನಿಟ್ಟಿನಲ್ಲಿ ಯೋಜನೆ ರೂಪಿಸುವ ಅಗತ್ಯವಿದೆ ಎಂದರು. ಇದಕ್ಕೆ ಸಚಿವ ತಂಗಡಗಿ ಪ್ರತಿಕ್ರಿಯಿಸಿ, ಬಿಜೆಪಿಯ ವರು ಸಹಕರಿಸಿದರೆ,ಡಿಜೆ ಬ್ಯಾನ್ ಮಾಡ್ತೀವಿ ಎಂದರು. ಈ ವೇಳೆ ಬಿಜೆಪಿಯ ಸುರೇಶ್ ಕುಮಾರ್ ಮಾತನಾಡಿ, ಡಿಜೆ ಶಬ್ದಕ್ಕೆ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳುತ್ತಿರುವವರು ಬೆಚ್ಚುವಂತಾಗಿದೆ. ಸಣ್ಣ ಮಕ್ಕಳು ಬೆಚ್ಚಿ ಒದ್ದಾಡುತ್ತವೆ. ಈ ಡಿಜೆ ದುಷ್ಪರಿಣಾಮಗಳ ಬಗ್ಗೆ ಗಂಭೀರವಾಗಿ ಯೋಚಿಸುವ ಅಗತ್ಯವಿದೆ ಎಂದರು.a








