ಬೆಂಗಳೂರು : ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ ಹೆರಬೇಕು ಎಂದು ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೆ, ಇದೀಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನು ಮುಂದೆ ಸರ್ಕಾರ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಗಳನ್ನು ನಡೆಸಬೇಕಾದರೆ ಪೂರ್ವಾನುಮತಿ ಕಡ್ಡಾಯ ಎಂದು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಯಿತು.
ಇನ್ನು ಇದೇ ವಿಚಾರವಾಗಿ ಸಂಪುಟ ಸಭೆ ಮುಕ್ತಾಯವಾದ ಬಳಿಕ, ಸರ್ಕಾರಿ ಆವರಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಪೂರ್ವನುಮತಿ ಕಡ್ಡಾಯ. ಹೊಸ ನಿಯಮಗಳನ್ನು ಕಾನೂನಾತ್ಮಕವಾಗಿ ಜಾರಿಗೆ ತರಲಾಗುತ್ತದೆ. ಯಾವುದೇ ಸಂಘಟನೆಯನ್ನು ನಾವು ನಿಷೇಧ ಮಾಡಲು ಆಗಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಮನಸ್ಸಿಗೆ ಬಂದಂತೆ ಕಾರ್ಯಕ್ರಮ ಮಾಡುವಂತಿಲ್ಲ ಎಂದು ವಿಧಾನಸೌಧದಲ್ಲಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ಸರ್ಕಾರಿ ಆವರಣಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಕಡ್ಡಾಯ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ಕೈಗೊಂಡಿತು. ಪರೋಕ್ಷವಾಗಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಸರ್ಕಾರ ನಿರ್ಬಂಧ ವಿಧಿಸಿದೆ.
ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳಿಗೆ ಪೂರ್ವಾಮತಿ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸಲು ಅನುಮತಿ ಕಡ್ಡಾಯ ಎಂದು ಆರ್ಎಸ್ಎಸ್ ಹೆಸರು ಉಲ್ಲೇಖ ಮಾಡದೆ ರಾಜ್ಯ ಸರ್ಕಾರ ಇದೀಗ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.