ಬೆಂಗಳೂರು :ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ, ಇನ್ಮುಂದೆ ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ ಬಳಸಲು ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲು ನಿನ್ನೆ ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಈ ಒಂದು ನಿರ್ಧಾರ ಕೈಗೊಳ್ಳಲಾಯಿತು.
ಹೌದು ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿನ ದಿನಗಳಲ್ಲಿ ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂ) ಬದಲು ಹಿಂದೆ ಇದ್ದಂತೆ ಬ್ಯಾಲೆಟ್ ಪೇಪರ್ ಮೂಲಕ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು, ಈ ಸಂಬಂಧ ಅಗತ್ಯ ಕಾನೂನು ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಜತೆಗೆ, ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವ ಣೆಗೆ ರಾಜ್ಯ ಚುನಾ ವಣಾ ಆಯೋಗವೇ ಪ್ರತ್ಯೇಕ ಮತದಾರರ ಪಟ್ಟಿ ಸಿದ್ದಪಡಿಸಲು ಮತ್ತು ಅದನ್ನು ಕಾಲ ಕಾಲಕ್ಕೆ ಪರಿಷ್ಕರಿಸು ವಂತೆ ಅವಕಾಶ ಕಲ್ಪಿಸಲು ಅಗತ್ಯ ಕಾನೂನು ತಿದ್ದುಪಡಿ ಮತ್ತು ನಿಯಮಾವಳಿಗಳಿಗೆ ಬದಲಾವಣೆ ತರಲು ತೀರ್ಮಾನಿಸಲಾಗಿದೆ.
ಜತೆಗೆ ಈ ಚುನಾವಣೆಗಳನ್ನು ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನದ ಮೂಲಕ ನಡೆಸಲು ಆಯೋಗಕ್ಕೆ ಶಿಫಾರಸು ಮಾಡಲು ತೀರ್ಮಾನಿ ಸಲಾಗಿದೆ. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಯಲ್ಲಿ ಈ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ.ಪಾಟೀಲ್ ಅವರು, ರಾಜ್ಯದಲ್ಲಿ ಈವರೆಗೆ ಕೇಂದ್ರ ಚುನಾವಣಾ ಆಯೋಗವು ವಿಧಾನ ಸಭಾ ಚುನಾವಣೆಗೆ ಸಿದ್ದಪಡಿಸುತ್ತಿದ್ದ ಮತದಾ ರರ ಪಟ್ಟಿ ತೆಗೆದುಕೊಂಡು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೋಗುತ್ತಿದ್ದೆವು.
ಆದರೆ, ಇಂದಿನ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾರರ ಪಟ್ಟಿ ಸಿದ್ಧಪಡಿಸಲು ಹಾಗೂ ಷ್ಕರಿಸುವ ಅವಕಾಶ ನೀಡಲು ಅಗತ್ಯ ಕಾನೂನು ತಿದ್ದುಪಡಿ ಮತ್ತು ನಿಯಮಾವಳಿ ಬದಲಾವಣೆಗೆ ತೀರ್ಮಾನಿಸ ಲಾಗಿದೆ ಎಂದರು.
ಇದರಿಂದ ಆಯೋಗವು ಸ್ಥಳೀಯ ಸಂಸ್ಥೆಗಳಚುನಾವಣೆಗೆ ತಮ್ಮದೇ ಪ್ರತ್ಯೇಣ ಮತದಾರರ ಪಟ್ಟಿ ಸಿದ್ದಪಡಿಸಲು, ಪರಿಷ್ಕರಿಸಲು ಅವಕಾಶ ಸಿಗಲಿದೆ. ಈ ತಿದ್ದುಪಡಿಯೊಂದಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಹೇಗೆ ಮಾಡಬೇಕು, ಯಾವ ಪದ್ದತಿಯಲ್ಲಿ ಮಾಡಬೇಕು ಎನ್ನುವ ಬಗ್ಗೆ ಶಿಫಾರಸು ಮಾಡಬೇಕಾಗುತ್ತದೆ., ಪ್ರಮುಖವಾಗಿ ಇವಿಮ್ ಬದಲು ಬ್ಯಾಲೆಟ್ ಪೇಪರ್ ಬಳಸಿ ಚುನಾವಣಾ ಮತದಾನ ನಡೆಸಲು ಶಿಫಾರಸು ಮಾಡಲು ಕೂಡ ತೀರ್ಮಾನಿಸಲಾಗಿದೆ ಎಂದರು.