ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಯಾಗಿದ್ದರಿಂದ ಹಲವೆಡೆ ಅವಾಂತರ ಸೃಷ್ಟಿಯಾಗಿತ್ತು. ಅಲ್ಲದೇ ಬಿಟಿಎಂ ಲೇಔಟ್ ನಲ್ಲಿ , ಅಪಾರ್ಟ್ಮೆಂಟಿನ ಬೇಸ್ಮೆಂಟ್ ನಲ್ಲಿದ್ದ ನೀರನ್ನು ಮೋಟಾರ್ ಮೂಲಕ ಹೊರ ಹಾಕುವ ವೇಳೆ ಓರ್ವ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದರು. ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.
ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರಿನ ಹಲವಡೆ ಕೆರೆಯ ಅಕ್ಕಪಕ್ಕದಲ್ಲಿ ಮನೆ ಕಟ್ಟಿದ್ದಾರೆ.ಕೆರೆಯ ಅಕ್ಕ ಪಕ್ಕದಲ್ಲಿ ಮನೆ ನಿರ್ಮಿಸಿರುವುದರಿಂದ ಸಮಸ್ಯೆಯಾಗುತ್ತಿದೆ. ಮುಂದೆ ಇಂತಹ ಘಟನೆಗಳು ಆಗದಂತೆ ಹೊಸ ಕಾನೂನು ತರುತ್ತೇವೆ. ಇನ್ನು ಮುಂದೆ ಮನೆ ಕಟ್ಟಬೇಕಾದರೆ ಬೇಸ್ಮೆಂಟ್ ಮಾಡಬಾರದು ಎಂದರು.
ಇನ್ಮುಂದೆ ಗ್ರೌಂಡ್ ಫ್ಲೋರ್ ನಲ್ಲಿ ಪಾರ್ಕಿಂಗ್ ಇರಬೇಕು. ಬೇಸ್ಮೆಂಟ್ ಬಗ್ಗೆ ಹೊಸ ಕಾನೂನು ತರುತ್ತೇವೆ. ಬೇಸ್ಮೆಂಟ್ ನಲ್ಲಿ ಪಾರ್ಕಿಂಗ್ ಮಾಡುವಂತಿಲ್ಲ ಕಟ್ಟುವಂತಿಲ್ಲ. ಇದರಿಂದ ಸಾಕಷ್ಟು ಅನಾಹುತವಾಗುತ್ತಿದೆ. ಬೇಸ್ಮೆಂಟ್ ಬಗ್ಗೆ ಪ್ರತ್ಯೇಕ ಕಾನೂನು ತರುತ್ತೇವೆ ಎಂದು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ತಿಳಿಸಿದರು. ಈ ವೇಳೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಹಾಗೂ ಸ್ಥಳೀಯ ಅಧಿಕಾರಿಗಳು ಉಪಸ್ಥಿತರಿದ್ದರು.