ಬೆಂಗಳೂರು : ದಿನಾಂಕ: 04-10-2024 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಬೆಂಬಲ ಸೂಚಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಶೇ. 70% ರಷ್ಟು ಗಾಮೀಣ ಜನತೆಗೆ ಸೇವೆ ನೀಡುತ್ತಿರುವ ದೊಡ್ಡ ಇಲಾಖೆಯಾಗಿದ್ದು, ಈ ಇಲಾಖೆಯ ಅಧಿಕಾರಿ-ನೌಕರರ ಬೇಡಿಕೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಈ ಹಿಂದಿನಿದಲೂ ಸ್ಪಂದಿಸುತ್ತಾ ಬಂದಿರುತ್ತದೆ.ಪ್ರಸ್ತುತ ಇಲಾಖೆಯ ಅಧಿಕಾರಿ-ನೌಕರರ ಪ್ರಮುಖ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಿ ಇಲಾಖೆಯ ಎಲ್ಲಾ ವೃಂದ ಸಂಘಗಳು ದಿನಾಂಕ 04-10-2024 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ “ಅನಿರ್ದಿಷ್ಟಾವದಿ ಹೋರಾಟ”ಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಬೆಂಬಲವನ್ನು ನೀಡಿರುತ್ತದೆ ಎಂದು ಸುತ್ತೋಲೆ ಹೊರಡಿಸಲಾಗಿದೆ.