ಮಂಡ್ಯ : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ರವರ ಅಂತಿಮ ಸಂಸ್ಕಾರವನ್ನು ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ನೆರವೇರಿಸಲು ಸಿದ್ಧತೆಗಳು ನಡೆಯುತ್ತಿವೆ.
ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಮದ್ದೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ನಾಳೆ ಮಧ್ಯಾಹ್ನ 3 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಸಿ.ಎಂ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ ನಡೆಯಲಿದೆ.
ಬೆಳಿಗ್ಗೆ 10 ರಿಂದ 03 ಗಂಟೆವರೆಗೂ ಸೋಮನಹಳ್ಳಿಯ ಕಾಫಿ ಡೇ ಬಳಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ರಾಜ್ಯ ಸರ್ಕಾರಿ ಗೌರವದೊಂದಿಗೆ ಎಸ್.ಎಂ.ಕೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಬೆಂಗಳೂರಿನಿಂದ ಪಾರ್ಥಿವ ಶರೀರ ತರುವ ವೇಳೆ ಬಿಡಿದಿ,ರಾಮನಗರ,ಕೆಂಗೇರಿ ಚನ್ನಪಟ್ಟಣದಲ್ಲಿ ಒಂದು ನಿಮಿಷ ವಾಹನ ನಿಲುಗಡೆ ಮಾಡಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಕಾಫಿ ಡೇ ಪಕ್ಕದ ಜಮೀನಿನಲ್ಲಿ ಒಕ್ಕಲಿಗ ಹಿಂದೂ ಸಂಪ್ರದಾಯದಂತೆ ಶ್ರೀಗಂಧ ಮರ ಬಳಸಿ ಅಂತ್ಯಕ್ರಿಯೆಗೆ ತೀರ್ಮಾನ ಕೈಗೊಳ್ಳಲಾಗಿದೆ. ಎಂದು ತಿಳೀಸಿದ್ದಾರೆ.
ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ನಂತರ ಅವರ ಪಾರ್ಥಿವ ಶರೀರವನ್ನು ಮದ್ದೂರಿನ ಸೋಮನಹಳ್ಳಿಗೆ ಕೊಂಡೊಯ್ಯಲಾಗುವುದು. ಅಲ್ಲಿ ಬೆಳಗ್ಗೆ 10.30ರಿಂದ ಮಧ್ಯಾಹ್ನ 3.00ಗಂಟೆವರೆಗೂ ಮಂಡ್ಯ, ಮೈಸೂರು ಭಾಗದ ಜನರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಇಂದು ಸಂಜೆ 5 ಗಂಟೆಗೆ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಸಂತಾಪ ಸೂಚಕ ಸಭೆ ಏರ್ಪಡಿಸಲಾಗಿದೆ. ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಹಾಗೂ ಶಾಸಕಾಂಗ ಸಭೆಯನ್ನು ಮುಂದೂಡಲಾಗಿದೆ. ನಾನು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯ ಸ್ವಾಮಿ ಅವರು ಅಂತಿಮ ದರ್ಶನ ಹಾಗೂ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲು ಮದ್ದೂರಿಗೆ ತೆರಳುತ್ತಿದ್ದೇವೆ ಎಂದು ಹೇಳಿದರು.