ಬೆಂಗಳೂರು : ತಮಿಳುನಾಡಿನಲ್ಲಿ ಫಂಗಲ್ ಚಂಡಮಾರುತದ ಪರಿಣಾಮದಿಂದ ತಮಿಳುನಾಡು ಅಷ್ಟೇ ಅಲ್ಲದೆ ಕರ್ನಾಟಕಕ್ಕೂ ಅದರ ಎಫೆಕ್ಟ್ ಬೀರಿದೆ. ಇದೀಗ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಜಟಿಜಿಟಿ ಮಳೆ ಹಾಗೂ ಚಳಿಯಿಂದ ಜನರು ನಡುಗುತ್ತಿದ್ದಾರೆ. ಆದರೆ BREAKING : ‘ಫಂಗಲ್’ ಎಫೆಕ್ಟ್ : ಇಂದು ಬೆಂಗಳೂರಿನಲ್ಲಿ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಬೆಂಗಳೂರು ನಗರ ಶಾಲಾ ಕಾಲೇಜುಗಳಿಗೆ ಯಾವುದೇ ರೀತಿಯಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.
ಹೌದು ಬೆಂಗಳೂರಿನ ನಗರ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಎಂದಿನಂತೆ ಸ್ಕೂಲ್ ಹಾಗೂ ಕಾಲೇಜ್ಗಳು ಓಪನ್ ಆಗಲಿವೆ. ಆದರೆ ಪೋಷಕರು ಎಚ್ಚರಿಕೆಯಿಂದ ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಕಳುಹಿಸಬೇಕು. ಎಚ್ಚರಿಕೆಯಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಸೂಚನೆ ನೀಡಲಾಗಿದೆ. ಹಾಗಾಗಿ ಮಳೆಯಲ್ಲಿಯೇ ಶಾಲಾ ಮಕ್ಕಳು ಕೊಡೆ ಹಿಡಿದುಕೊಂಡು ಶಾಲೆಗೆ ತೆರಳುತ್ತಿದ್ದಾರೆ.ನಿನ್ನೆ ರಾತ್ರಿಯಿಂದ ನಿರಂತರವಾಗಿ ಬೆಂಗಳೂರು ನಗರದಾದ್ಯಂತ ಜಟಿಜಿಟಿ ಮಳೆ ಆಗುತ್ತದೆ ಚಳಿ ಮತ್ತು ಮಳೆಗೆ ರಾಜಧಾನಿಯ ಜನ ಇದೀಗ ನಡುಗುತ್ತಿದ್ದು, ತತ್ತರಿಸಿದ್ದಾರೆ.
ಇದೇ ವೇಳೆ ಫಂಗಲ್ ಚಂಡಮಾರುತ ಪರಿಣಾಮದಿಂದಾಗಿ ರಾಜ್ಯದ ಮೂರು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಮೈಸೂರು ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹಾಗಾಗಿ ಇಂದು ಒಂದು ದಿನ ಮಾತ್ರ ಈ ಮೂರು ಜಿಲ್ಲೆಗಳಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.