ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಬೆಂಗಳೂರಿನ ಸದಾಶಿವ ನಗರದಲ್ಲಿರೋ ಗೃಹ ಸಚಿವ ಜಿ.ಪರಮೇಶ್ವರ್ ಅವರ ನಿವಾಸಕ್ಕೆ ಕೆ.ಎನ್ ರಾಜಣ್ಣ ಭೇಟಿ ನೀಡಿ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಮನವಿ ಮಾಡಿದರು. ಬಳಿಕ ಜಿ.ಪರಮೇಶ್ವರ್ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿಂತೆ ಸಚಿವ ಕೆ.ಎನ್ ರಾಜಣ್ಣ ಮನವಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಭೇಟಿಯಾಗಿರುವ ಜಿ ಪರಮೇಶ್ವರ್, ಹನಿ ಟ್ರ್ಯಾಪ್ ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಸಚಿವ ಕೆ.ಎನ್ ರಾಜಣ್ಣ ಜಿ ಪರಮೇಶ್ವರ್ ಅವರಿಗೆ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದಾರೆ. ಹಾಗಾಗಿ ಪರಮೇಶ್ವರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಪರಮೇಶ್ವರ ಭೇಟಿ ಇದೀಗ ಕುತೂಹಲ ಕೆರಳಿಸಿದೆ ಎನ್ನಲಾಗುತ್ತಿದೆ.