ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ವಿದೇಶಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಪೊಲೀಸರು ಕೊಪ್ಪಳ ಜಿಲ್ಲೆಯ ವಿವಿಧ ಹೋಂ ಸ್ಟೇ, ರೆಸಾರ್ಟ್ ಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.
ಹೌದು, ವಿದೇಶಿಗರ ಮಾಹಿತಿಯನ್ನು ನೀಡದಿರುವುದು ಮತ್ತು ಅಕ್ರಮ ಚಟುವಟಿಕೆಗಳ ಆರೋಪದ ಮೇರೆಗೆ ಇಂದು ಗಂಗಾವತಿ ಸುತಮುತ್ತಲಿನ ಹೋಂ ಸ್ಟೇ, ರೆಸಾರ್ಟ್, ಹೋಟೆಲ್ ಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ನೇತೃತ್ವದಲ್ಲಿ ಹೋಂ ಸ್ಟೇ, ರೆಸಾರ್ಟ್ ಗಳ ಮೇಲೆ ದಿಢೀರ್ ದಾಳಿ ನಡೆಸಲಾಗಿದ್ದು, ದಾಳಿ ವೇಳೆ ರಿಜಿಸ್ಟರ್ ಬುಕ್ ಸೇರಿ ವಿವಿಧ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.