ಬೆಳಗಾವಿ : 15 ವರ್ಷದ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಕಾನೂನು ಸಂಘರ್ಷಕ್ಕೆ ಒಳಪಟ್ಟ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪರಾರಿಯಾದ ಮತ್ತೊಬ್ಬ ಆರೋಪಿ ಬಂಧನಕ್ಕೆ ಜಾಲ ಬೀಸಿದ್ದೇವೆ ಎಂದು ನಗರ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ಬೊರಸೆ ಹೇಳಿದರು.
ಕಳೆದ 2024 ಡಿಸೇಂಬರ್ ನಲ್ಲಿ ಬಾಲಕಿಯನ್ನು ಆಕೆಯ ಸ್ನೇಹಿತ ಪುಸಲಾಯಿಸಿ ಕರೆದು ಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರದ ದೃಶ್ಯವನ್ನು ಆರೋಪಿಗಳು ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಅದನ್ನೇ ತೋರಿಸಿ ಬ್ಲ್ಯಾಕ್ಮೇಲ್ ಮಾಡಿ, 2025ರ ಜನವರಿಯಲ್ಲಿ ಮತ್ತೆ ಮೂವರು ಅತ್ಯಾಚಾರ ಮಾಡಿದ್ದಾರೆ. ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರ ಮಾಡಿದ್ದಾರೆ.
ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಎಪಿಎಂಸಿ ಠಾಣೆಯಲ್ಲಿ 6 ಮಂದಿ ವಿರುದ್ಧ ಶನಿವಾರ ಎಫ್ಐಆರ್ ದಾಖಲಾಗಿತ್ತು. ಅದಾದ 24 ತಾಸಿನೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂತ್ರಸ್ತೆ ಮತ್ತು ಆರೋಪಿಗಳು ಬೆಳಗಾವಿ ಜಿಲ್ಲೆಯವರೇ ಆಗಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ಬೊರಸೆ ಹೇಳಿದರು.