ಶಿವಮೊಗ್ಗ : ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಗ್ಯಾಂಗ್ ವಾರ್ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಇತ್ತೀಚಿಗೆ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣ ಸಂಬಂಧ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ ಆರೋಪಿ ಶೋಯಬ್ ಮೇಲೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ ಐ ರವಿ ಅವರು ಫೈರಿಂಗ್ ಮಾಡಿ ಬಂಧಿಸಿದ್ದಾರೆ.
ಬಂಧನಕ್ಕೆ ತೆರಳಿದ್ದ ವೇಳೆ ಆರೋಪಿ ಶೋಯಬ್ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಆರೋಪಿ ಪಿಎಸ್ ಐ ರವಿ ಅವರು ಫೈರಿಂಗ್ ಮಾಡಿದ್ದು, ಗಾಯಗೊಂಡ ಆರೋಪಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.