ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ 4.5 ಕೋಟಿ ಮೌಲ್ಯದ ಗಾಂಜಾವನ್ನು ಸಿಬ್ಬಂದಿಗಳು ವಶಕ್ಕೆ ಪಡೆದುಕೊಂಡಿದ್ದು, ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಭದ್ರತಾ ಸಿಬ್ಬಂದಿಗಳು ನಿಜಾಮುದ್ದೀನ್ ಅಬೂಬಕರ್ ಎಂಬಾತನನ್ನ ಬಂಧಿಸಿದ್ದಾರೆ. 4.5 ಕೋಟಿ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಈತ ಏರ್ ಏಷ್ಯಾ ವಿಮಾನದಲ್ಲಿ ಗಾಂಜಾ ತಂದಿದ್ದನು. ಭದ್ರತಾ ಸಿಬ್ಬಂದಿ ತಪಾಸಣೆ ನಡೆಸುವಾಗ ಸಿಕ್ಕಿಹಾಕಿಕೊಂಡಿದ್ದಾನೆ.
4.5 ಕೋಟಿ ಮೌಲ್ಯದ ಹೈಡ್ರೋಪೋನಿಕಲ್ ಗಾಂಜಾ ವಶಪಡಿಸಿಕೊಂಡ ಭದ್ರತಾ ಸಿಬ್ಬಂದಿಗಳು ಆರೋಪಿಯನ್ನ ವಶಕ್ಕೆ ಪಡೆದುಕೊಂಡಿದ್ದಾರೆ.








